ಪ್ರತಾಪ್‌ಗಢ (ಉತ್ತರ ಪ್ರದೇಶ):ಸಾಮೂಹಿಕ ಅತ್ಯಾಚಾರ ಮಾಡುವ ಜತೆಗೆ ಅಪ್ರಾಪ್ತ ಬಾಲಕಿಯ ಹತ್ಯೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳಿಗೆ ಉತ್ತರ ಪ್ರದೇಶದ ಪ್ರತಾಪ್‌ಗಢ ಜಿಲ್ಲೆಯ ಪೋಕ್ಸೊ ನ್ಯಾಯಾಲಯ ಮರಣದಂಡನೆ ವಿಧಿಸಿದೆ. 2021 ಡಿಸೆಂಬರ್ 27ರಂದು ನಡೆದಿದ್ದ ಈ ಪ್ರಕರಣದ ತ್ವರಿತ ವಿಚಾರಣೆ ನಡೆಸಿದ ನ್ಯಾಯಾಲಯವು 11 ತಿಂಗಳೊಳಗೆ ತೀರ್ಪು ಪ್ರಕಟಿಸಿತು.
11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ಎರಡು ಕಣ್ಣುಗಳು ಮತ್ತು ಮುಖ, ಕಾಲಿನ ಮೂಳೆಗಳಿಗೆ ಹಾನಿ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ತಲಾ 50,000 ರೂಪಾಯಿ ದಂಡವನ್ನು ನ್ಯಾಯಾಲಯವು ವಿಧಿಸಿದೆ.