ಭೋಜ್ಪುರ್ (ಬಿಹಾರ):ಕೊಯಿಲ್ವಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದವರಿಂದ ಗುಂಡಿನ ಸದ್ದು ಕೇಳಿಬಂದಿದೆ.ಶುಕ್ರವಾರ ಮಧ್ಯಾಹ್ನ ಬಿಹಾರದ ಭೋಜ್‌ಪುರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮರಳು ಗಣಿಗಾರಿಕೆ ವಿಚಾರವಾಗಿ ಎರಡೂ ಗ್ಯಾಂಗ್‌ಗಳು ಭೀಕರವಾಗಿ ಗುಂಡು ಹಾರಿಸಿಕೊಂಡಿದ್ದು, ಗುಂಡು ತಗುಲಿ ಬ್ಯಾಂಕ್ ಉದ್ಯೋಗಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದವರು ಹೇಗೋ ಪಾರಾಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಈ ಭೀಕರ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು, ವಿಡಿಯೋ ವೈರಲ್ ಆಗಿದೆ.
ಶುಕ್ರವಾರ ಮಧ್ಯಾಹ್ನ ನಡೆದ ಈ ಘಟನೆ ನಂತರ ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಘಟನೆ ಕುರಿತು ಮಾಹಿತಿ ಪಡೆದ ಕೊಯಿಲ್ವಾರ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಎರಡೂ ಶವಗಳನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.