ಕರ್ನಾಟಕ

karnataka

ETV Bharat / bharat

ಜಮ್ಮು- ಕಾಶ್ಮೀರದ ಕುಲ್ಗಾಮ್ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ - ಜಮ್ಮು-ಕಾಶ್ಮೀರದಲ್ಲಿ ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದ ಕುಲ್ಗಾಮ್​ನಲ್ಲಿ ಭದ್ರತಾ ಸಿಬ್ಬಂದಿ ಮತ್ತು ಉಗ್ರರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾದ ಬಗ್ಗೆ ವರದಿಯಾಗಿದೆ.

two-militants
ಉಗ್ರರು ಹತ

By

Published : Apr 11, 2022, 9:56 PM IST

ಕುಲ್ಗಾಮ್:ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕೋರಲ್ ಮಂಜ್‌ಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಇಬ್ಬರು ಉಗ್ರರು ಭದ್ರತಾ ಸಿಬ್ಬಂದಿ ಗುಂಡೇಟಿಗೆ ಹತರಾಗಿದ್ದಾರೆ. ಈ ಪ್ರದೇಶದಲ್ಲಿ ಉಗ್ರರು ಮೂವರು ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿದ್ದು, ಕಾಶ್ಮೀರ ಪೊಲೀಸ್ ಪಡೆ ಮತ್ತು ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿತ್ತು.

ಶೋಧ ಕಾರ್ಯಾಚರಣೆಯ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಫೈರಿಂಗ್​ ಮಾಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:'ಅಭಿನಂದನ್​ ಬಿಟ್ಟುಕೊಟ್ಟು ರಾಜತಾಂತ್ರಿಕತೆ ಮೆರೆದ ಇಮ್ರಾನ್'

ABOUT THE AUTHOR

...view details