ಶ್ರೀನಗರ (ಜಮ್ಮು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ. ಇಂದು ಬೆಳಗ್ಗೆ ಪುಲ್ವಾಮಾ ಜಿಲ್ಲೆಯ ನೈನಾ ಬಟ್ಪೋರಾ ಗ್ರಾಮದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದಿವೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯ ನಿರತವಾಗಿವೆ ಎಂದು ಕಾಶ್ಮೀರ ಪೊಲೀಸ್ ಟ್ವೀಟ್ ಮಾಡಿದೆ.
ಪುಲ್ವಾಮಾದಲ್ಲಿ ಎನ್‌ಕೌಂಟರ್... ಇಬ್ಬರು ಉಗ್ರರ ಸೆರೆ?
ಪುಲ್ವಾಮಾ ಜಿಲ್ಲೆಯ ನೈನಾ ಬಟ್ಪೋರಾ ಗ್ರಾಮದಲ್ಲಿಂದು ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಪುಲ್ವಾಮಾದಲ್ಲಿ ಎನ್‌ಕೌಂಟರ್
ಇದನ್ನೂ ಓದಿ:ಉಕ್ರೇನ್‌ನಲ್ಲಿ ರಷ್ಯಾ ರಾಸಾಯನಿಕ ಅಸ್ತ್ರಗಳ ಬಳಕೆ ಬಗ್ಗೆ ಎಚ್ಚರಿಸಿದ ಶ್ವೇತಭವನ
ಕೆಲ ವರದಿಗಳ ಪ್ರಕಾರ, ಭದ್ರತಾ ಪಡೆಗಳ ಶೋಧ ತಂಡವು ಶಂಕಿತ ಪ್ರದೇಶವನ್ನು ತಲುಪುತ್ತಿದ್ದಂತೆ, ಅಡಗಿಕೊಂಡಿದ್ದ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದರು. ನಂತರ ಎನ್‌ಕೌಂಟರ್ ನಡೆಸಲಾಯಿತು. ಎನ್‌ಕೌಂಟರ್ ಸ್ಥಳದಲ್ಲಿ ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗಿದೆ.