ತಿರುವನಂತಪುರಂ(ಕೇರಳ):ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೋವಿಡ್ ವ್ಯಾಕ್ಸಿನೇಷನ್ ನೀಡಲಾಗ್ತಿದೆ. ಆದರೆ, ಕೇರಳದಲ್ಲಿ 15 ವರ್ಷದೊಳಗಿನ ಇಬ್ಬರು ಹೆಣ್ಣು ಮಕ್ಕಳಿಗೆ ಕೋವಿಡ್ ಡೋಸ್ ನೀಡಲಾಗಿದ್ದು, ಇದರ ಬೆನ್ನಲ್ಲೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಿರುವನಂತಪುರಂನ ಆರ್ಯನಾಡು ಗ್ರಾಮಾಂತರ ಕೋವಿಡ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ನಿನ್ನೆ 15 ವರ್ಷದ ಇಬ್ಬರು ಬಾಲಕಿಯರಿಗೆ ತಪ್ಪಾಗಿ ಕೋವಿಡ್ ವ್ಯಾಕ್ಸಿನೇಷನ್ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪೋಷಕರು ನೀಡಿರುವ ದೂರಿನ ಅನ್ವಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.