ತಿರುವನಂತಪುರಂ:ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರಿಗೆ ಅಗ್ನಿಶಾಮಕ ತರಬೇತಿ ನೀಡಿದ ವಿವಾದ ಭುಗಿಲೆದ್ದಿದ್ದು, ಇಬ್ಬರು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಮೂವರನ್ನು ವರ್ಗಾವಣೆ ಮಾಡಲಾಗಿದೆ.
ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಮತ್ತು ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಮಾ. 30ರಂದು, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಆಲುವಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಭಾಗವಾಗಿ ಪಿಎಫ್‌ಐ ಕಾರ್ಯಕರ್ತರಿಗೆ ತರಬೇತಿ ಆಯೋಜಿಸಿದ್ದರು ಎಂದು ವರದಿಯಾಗಿದೆ.