ಮಾಧುಪುರ್(ರಾಜಸ್ಥಾನ): ರಾಜಸ್ಥಾನದ ಅನೇಕ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.
ರಾಜ್ಯದ ಮಾಧುಪುರ್ನಲ್ಲಿ ತುಂಬಿ ಹರಿಯುತ್ತಿದ್ದ ಚರಂಡಿ ನೀರಿನ ಕಾಲುವೆ ದಾಟುತ್ತಿದ್ದ ವೇಳೆ ತಂದೆ-ಮಗ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಕೆಲವರು ಘಟನೆಯ ವಿಡಿಯೋ ಸೆರೆ ಹಿಡಿದಿದ್ದಾರೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಚರಂಡಿ ಉಕ್ಕಿ ಹರಿಯುತ್ತಿತ್ತು. ಈ ವೇಳೆ ತಂದೆ-ಮಗ ರಸ್ತೆ ದಾಟಲು ಮುಂದಾಗಿದ್ದಾರೆ. ಆದರೆ ಕ್ಷಣಾರ್ಧದಲ್ಲಿ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.