ಪಾಟ್ನಾ: ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಒಂದೇ ಕುಟುಂಬದ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ರಾಜೀವ್ ಸಿಂಗ್ ಮತ್ತು ಆತನ ತಂದೆ ಸುಧೀರ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆಗೆ ಫುಲ್ವಾರಿ ಷರೀಫ್ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಸಬಾಜ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರಾಜೀವ್ ಅವರ ಕಿರಿಯ ಸಹೋದರ ಸಂಜೀವ್ ಸಿಂಗ್ ತೀವ್ರವಾಗಿ ಗಾಯಗೊಂಡಿದ್ದಾರೆ.