ನವದೆಹಲಿ:ಸಹೋದರಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಬ್ಬರು ಪೊಲೀಸರ ಬಂಧನ ಮಾಡಲಾಗಿದೆ. ಇದರ ಬಂಧನಕ್ಕೆ ಸಂಬಂಧಿಸಿದಂತೆ ನೈಋತ್ಯ ದೆಹಲಿ ಡಿಸಿಪಿ ಪ್ರತಾಪ್ ಸಿಂಗ್ ಮಾಹಿತಿ ನೀಡಿದ್ದಾರೆ. ಇಬ್ಬರು ಪೊಲೀಸರು ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸಂತ್ರಸ್ತ ಸಹೋದರಿಯರು ಸಾಗರಪುರ ಪ್ರದೇಶದಲ್ಲಿ ವಾಸವಾಗಿದ್ದರು. ತಮ್ಮ ಮೇಲೆ ನಡೆದ ದುಷ್ಕೃತ್ಯದ ಬಗ್ಗೆ ಪ್ರಕರಣ ದಾಖಲು ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.