ಬಂಡಿಪೋರಾ(ಜಮ್ಮು-ಕಾಶ್ಮೀರ):ಪೊಲೀಸರನ್ನ ಗುರಿಯಾಗಿಸಿಕೊಂಡು ಉಗ್ರರು ನಡೆಸಿರುವ ಗುಂಡಿನ ದಾಳಿಯಲ್ಲಿ ಇಬ್ಬರು ಹುತಾತ್ಮರಾಗಿದ್ದಾರೆ. ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶನ್ ಚೌಕ್ನಲ್ಲಿ ಈ ಘಟನೆ ನಡೆದಿದೆ.
ಇಂದು ಸಂಜೆ ಬಂಡಿಪೋರಾದ ಗುಲ್ಶನ್ ಚೌಕ್ನಲ್ಲಿ ಪೊಲೀಸರ ಗುಂಪಿನ ಮೇಲೆ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆಂದು ತಿಳಿದು ಬಂದಿದೆ.