ಬುಲಂದ್ಶಹರ್: ಉತ್ತರ ಪ್ರದೇಶದ ನ್ಯಾಯಾಲಯವೊಂದು ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗಳಿಗೆ 30 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಅಪರಾಧಿಗಳಾದ ಬಿರೇಶ್( 21), ಗಿತಮ್(20) ಶಿಕ್ಷೆಗೊಳಗಾದವರು. ನ್ಯಾ. ಪಲ್ಲವಿ ಅಗರ್ವಾಲ್ ಇಬ್ಬರು ಅಪರಾಧಿಗಳಿಗೆ ಪೊಕ್ಸೊ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಿ ತೀರ್ಪಿತ್ತರು.
13 ವರ್ಷದ ಬಾಲಕಿ ಮೇಲೆ ರಾಮಘಟ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಜನವರಿ 11 ರಂದು ಅತ್ಯಾಚಾರ ನಡೆದಿತ್ತು. ಪ್ರಕರಣ ಸಂಬಂಧ ಇಬ್ಬರನ್ನು ಘಟನೆ ನಡೆದ 52 ದಿನಗಳೊಳಗೆ ಬಂಧಿಸಿ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿತ್ತು ಎಂದು ಬುಲಂದ್ಶಹರ್ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ:ದೆಹಲಿಯಲ್ಲಿ ಆತ್ಮಹತ್ಯೆಗೆ ಶರಣಾದ ವಿಜಯಪುರದ ಯೋಧ