ಲಕ್ನೋ (ಉತ್ತರ ಪ್ರದೇಶ): ರಾಮ ಜನ್ಮಭೂಮಿ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರವಾಗಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ಉತ್ತರ ಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ ನೀಡಿದ್ದ ಐದು ಎಕರೆ ಜಮೀನಿನ ಮಾಲೀಕತ್ವ ತಮ್ಮದೆಂದು ದೆಹಲಿ ಮೂಲದ ಇಬ್ಬರು ಸಹೋದರಿಯರು ಅಲಹಾಬಾದ್ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ.
'ಅಯೋಧ್ಯೆಯಲ್ಲಿ ಮಸೀದಿಗೆ ನೀಡಿರುವ ಭೂಮಿ ನಮ್ಮದು': ಕೋರ್ಟ್ ಮೆಟ್ಟಿಲೇರಿದ ರಾಣಿಯರು! - ಅಲಹಾಬಾದ್ ಹೈಕೋರ್ಟ್
ರಾಣಿ ಕಪೂರ್ ಅಲಿಯಾಸ್ ರಾಣಿ ಬಲೂಜಾ ಮತ್ತು ರಾಮ ರಾಣಿ ಪಂಜಾಬಿ ಎಂಬ ಇಬ್ಬರು ಸಹೋದರಿಯರು ಅಲಹಾಬಾದ್ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿದ್ದು, ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ಉತ್ತರ ಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ ನೀಡಿದ್ದ ಐದು ಎಕರೆ ಜಮೀನಿನ ಮಾಲೀಕತ್ವ ತಮ್ಮದೆಂದು ಪ್ರತಿಪಾದಿಸಿದ್ದಾರೆ.
mosque
ತಮ್ಮ ತಂದೆ ಜ್ಞಾನ ಚಂದ್ರ ಪಂಜಾಬಿ 1947ರಲ್ಲಿ ಪಂಜಾಬ್‌ನಿಂದ ವಿಭಜನೆಯ ಸಮಯದಲ್ಲಿ ಭಾರತಕ್ಕೆ ಬಂದು ಫೈಜಾಬಾದ್ (ಈಗಿನ ಅಯೋಧ್ಯೆ) ಜಿಲ್ಲೆಯಲ್ಲಿ ನೆಲೆಸಿದ್ದರು. ಆಗ ತಮ್ಮ ತಂದೆಗೆ ಧನ್ನಿಪುರ ಗ್ರಾಮದಲ್ಲಿ 28 ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿತ್ತು ಎಂದು ರಾಣಿ ಕಪೂರ್ ಅಲಿಯಾಸ್ ರಾಣಿ ಬಲೂಜಾ ಮತ್ತು ರಾಮ ರಾಣಿ ಪಂಜಾಬಿ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದ ಮುಂದೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯದ ನೋಂದಾವಣೆಯಲ್ಲಿ ದಾಖಲಿಸಲಾಗಿದ್ದು, ಫೆಬ್ರವರಿ 8ರಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ.