ಗುವಾಹಟಿ (ಅಸ್ಸಾಂ):ಇಬ್ಬರು ಸಹೋದರಿಯರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಶ್ಚಿಮ ಅಸ್ಸಾಂನ ಕೊಕ್ರಜಾರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಾಲಕಿಯರ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂದು ಬಾಲಕಿಯರ ಕುಟುಂಬಸ್ಥರು ಆರೋಪಿಸಿದ್ದಾರೆ. ಅಭಯಕುತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶುಕ್ರವಾರ ರಾತ್ರಿ 14 ಮತ್ತು 16 ವರ್ಷದ ಬಾಲಕಿಯರು ಮೃತಪಟ್ಟಿದ್ದಾರೆ. ಶುಕ್ರವಾರ ಮಧ್ಯಾಹ್ನದಿಂದ ಇವರು ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.