ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯ ಮೆಂಧರ್ ಉಪ ವಿಭಾಗದಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಕಿರಿಯ ನಿಯೋಜಿತ ಅಧಿಕಾರಿ (JCO) ಮತ್ತು ಓರ್ವ ಸೈನಿಕ ಹುತಾತ್ಮರಾಗಿದ್ದಾರೆ.
ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಓರ್ವ ಸೇನಾಧಿಕಾರಿ ಸೇರಿ ಇಬ್ಬರು ಹುತಾತ್ಮ - ಕಿರಿಯ ನಿಯೋಜಿತ ಅಧಿಕಾರಿ
ಮೆಂಧರ್ ಉಪ ವಿಭಾಗದ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದ್ದು, ಈ ವೇಳೆ ಓರ್ವ ಸೇನಾಧಿಕಾರಿ ಸೇರಿ ಇಬ್ಬರು ಹುತಾತ್ಮರಾಗಿದ್ದಾರೆ.
soldier
ಮೆಂಧರ್ ಉಪ ವಿಭಾಗದ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಈ ವೇಳೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಪೊಲೀಸರು ನೀಡಿರುವ ಪ್ರಕಾರ, ಭೀಂಬರ್ ಗಾಲಿ ಮತ್ತು ಸುರಂಕೋಟೆ ನಡುವಿನ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.