ಶ್ರೀನಗರ(ಜಮ್ಮು ಕಾಶ್ಮೀರ):ಸರ್ಕಾರಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಪ್ರಾಂಶುಪಾಲ ಮತ್ತು ಶಿಕ್ಷಕಿಯನ್ನು ಶಾಲೆಯೊಳಗೆ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಶ್ರೀನಗರದ ಈದ್ಗಾದ ಪ್ರದೇಶದಲ್ಲಿ ನಡೆದಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಾಂಶುಪಾಲ ಕಾಶ್ಮೀರಿ ಪಂಡಿತ ಕುಟುಂಬಕ್ಕೆ ಸೇರಿದವನಾಗಿದ್ದು, ಶಿಕ್ಷಕಿ ಸಿಖ್ ಧರ್ಮಕ್ಕೆ ಸೇರಿದವರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಾವನ್ನಪ್ಪಿದವರನ್ನು ಶಿಕ್ಷಕಿ ಸ್ಪಿಂದರ್ ಕೌರ್ ಮತ್ತು ಪ್ರಾಂಶುಪಾಲ ದೀಪಕ್ ಚಂದ್ ಎಂದು ಗುರುತಿಸಲಾಗಿದೆ. ದಾಳಿಯ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿವೆ.