ಬುದ್ಗಾಮ್(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿಂದು ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭದ್ರತಾ ಪಡೆಗಳ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು. ಬುದ್ಗಾಮ್‌ನ ನ್ಯಾಯಾಲಯದ ಸಂಕೀರ್ಣದ ಬಳಿ ಅನುಮಾನಾಸ್ಪದ ವಾಹನವನ್ನು ತಡೆಯಲು ಪ್ರಯತ್ನಿಸಿದಾಗ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ.
ಬುದ್ಗಾಮ್ ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆಗೈದ ಭಾರತೀಯ ಸೇನೆ - ಈಟಿವಿ ಭಾರತ ಕನ್ನಡ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಎನ್ಕೌಂಟರ್ ಮೂಲಕ ಹೊಡೆದುರುಳಿಸಿದೆ.
ಈ ವೇಳೆ ಪ್ರತೀಕಾರದ ಗುಂಡಿನ ದಾಳಿಯನ್ನು ಸೇನೆ ನಡೆಸಿದ್ದು ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಇವರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಯೋತ್ಪಾದಕರನ್ನು ಪುಲ್ವಾಮಾದ ಅರ್ಬಾಜ್ ಮೀರ್ ಮತ್ತು ಶಾಹಿದ್ ಶೇಖ್ ಎಂದು ಗುರುತಿಸಲಾಗಿದೆ. ಇವರಿಬ್ಬರು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಎಡಿಜಿಪಿ ಮಾಹಿತಿ ನೀಡಿದರು.
ಇದನ್ನೂ ಓದಿ:ಜಮ್ಮು ಕಾಶ್ಮೀರದಲ್ಲಿ ಭೂಕುಸಿತ.. ಬೆಟ್ಟದಿಂದ ರಸ್ತೆಗೆ ಬಿದ್ದ ಕಲ್ಲುಗಳು.. ಜಮ್ಮು ಶ್ರೀನಗರ ಸಂಚಾರ್ ಬಂದ್