ಮುಂಬೈ (ಮಹಾರಾಷ್ಟ್ರ): ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ)ದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಹಾರಾಷ್ಟ್ರದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 50 ಕೋಟಿ ರೂಪಾಯಿ ಮೌಲ್ಯದ 7.9 ಕೆಜಿ ಹೆರಾಯಿನ್ ಜಪ್ತಿ ಮಾಡಿದ್ದಾರೆ.
ಮಾದಕ ವಸ್ತು ಸಾಗಿರುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐನ ಮುಂಬೈ ವಲಯದ ಅಧಿಕಾರಿಗಳು ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಅಡಿಸ್ ಅಬಾಬಾ (ಇಥಿಯೋಪಿಯಾ)ನಿಂದ ಬಂದ ವಿಮಾನದಲ್ಲಿ ಬಂದಿಳಿದ ಜಿಂಬಾಬ್ವೆ ಮೂಲದ ಓರ್ವ ಪುರುಷ ಮತ್ತು ಮಹಿಳೆಯನ್ನು ವಶಕ್ಕೆ ಪಡೆದು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಟ್ರಾಲಿ ಬ್ಯಾಗ್‌ನಲ್ಲಿಟ್ಟಿದ್ದ ಹೆರಾಯಿನ್ ಪತ್ತೆಯಾಗಿದೆ.