ನವದೆಹಲಿ:ಸುಪ್ರೀಂಕೋರ್ಟ್ ನೂತನ ಮುಖ್ಯ ನಾಯಮೂರ್ತಿಗಳಾಗಿ ನಿಯೋಜಿತರಾಗಿದ್ದ ಉದಯ್ ಉಮೇಶ್ ಲಲಿತ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿಂದು ಪ್ರಮಾಣ ವಚನ ಬೋಧಿಸಿದರು. ಯು.ಯು. ಲಿಲಿತ್ ಅವರು 49ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದರು. ಯುಯು ಲಲಿತ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ 74 ದಿನಗಳ ಕಾಲ ಕೆಲಸ ನಿರ್ವಹಿಸಲಿದ್ದಾರೆ.
ಇದಕ್ಕೂ ಮೊದಲು ಅವರು ನಿರ್ಗಮಿತ ಸಿಜೆಐ ಎನ್.ವಿ. ರಮಣ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿ, ಸುಪ್ರೀಂಕೋರ್ಟ್ ಮುಂದಿರುವ ಪ್ರಕರಣಗಳನ್ನು ಪಟ್ಟಿ ಮಾಡುವುದು ಮತ್ತು ತುರ್ತು ವಿಷಯಗಳನ್ನು ಕೈಗೆತ್ತಿಕೊಂಡು ಪರಿಹರಿಸುವುದು ನನ್ನ ಮೊದಲ ಆದ್ಯತೆಯಾಗಲಿದೆ ಎಂದು ತಿಳಿಸಿದರು.