ಉಧಂಪುರ(ಜಮ್ಮು ಕಾಶ್ಮೀರ):ನಿಗೂಢ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿ 14 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯ ಸ್ಲಾಥಿಯಾ ಚೌಕ್‌ನಲ್ಲಿ ಸಂಭವಿಸಿದೆ.
ಸ್ಫೋಟದ ನಂತರ ಎಲ್ಲರನ್ನೂ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದರೆ, ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಗೆ ಸ್ಫೋಟದ ಶಬ್ದ ಕೇಳಿಸಿದೆ ಎಂದು ತಿಳಿದುಬಂದಿದೆ.