ಹೈದರಾಬಾದ್:ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಮೇ 2ರಿಂದ ಮೇ.17ರವರೆಗೆ ನಿಗದಿಯಾಗಿದ್ದ ಯುಜಿಸಿ ನೆಟ್ ಪರೀಕ್ಷೆ ಮುಂದೂಡಿ ಮಹತ್ವದ ಆದೇಶ ಹೊರಹಾಕಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟ್ವೀಟ್ ಮಾಡಿದ್ದಾರೆ.
ಪ್ರಸಕ್ತ ಸಾಲಿನ ಯುಜಿಸಿ - ನೆಟ್ ಪರೀಕ್ಷೆ ಮೇ 2ರಿಂದ ಆರಂಭಗೊಂಡು, ಮೇ.17ಕ್ಕೆ ಮುಕ್ತಾಯವಾಗಬೇಕಾಗಿತ್ತು. ಆದರೆ, ಕೊರೊನಾ ಸೋಂಕಿನ ಕಾರಣದಿಂದಾಗಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಹೊಸ ದಿನಾಂಕ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.