ಉಜ್ಜಯಿನಿ(ಮಧ್ಯಪ್ರದೇಶ) :ವೇಗವಾಗಿ ಬಂದ ಶಾಲಾ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ದುರಂತದಲ್ಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 19 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಗಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ನಿಯಂತ್ರಣ ತಪ್ಪಿ ಮರಕ್ಕೆ ಶಾಲಾ ವಾಹನ ಡಿಕ್ಕಿ ; ಚಾಲಕ ಸಾವು, 19 ಮಂದಿ ವಿದ್ಯಾರ್ಥಿಗಳಿಗೆ ಗಾಯ - ಉಜ್ಜಯಿನಿಯಲ್ಲಿ ಶಾಲಾ ವಾಹನ ಅಪಘಾತದಲ್ಲಿ ಚಾಲಕ ಸಾವು
ಚಾಲಕ ಹಾಡು ಕೇಳುತ್ತಾ ವಾಹನ ಚಲಾಯಿಸುತ್ತಿದ್ದ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ರಸ್ತೆ ಪಕ್ಕದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ಬಳಿಕ ಶಾಲಾ ವಾಹನ ಸಣ್ಣ ಹಳ್ಳಕ್ಕೆ ಮಗುಚಿ ಬಿದ್ದಿದೆ..
ನಿಯಂತ್ರಣ ತಪ್ಪಿ ಮರಕ್ಕೆ ಶಾಲಾ ವಾಹನ ಡಿಕ್ಕಿ; ಚಾಲಕ ಸಾವು, 19 ಮಂದಿ ವಿದ್ಯಾರ್ಥಿಗಳಿಗೆ ಗಾಯ
ಒಟ್ಟು 21 ಮಕ್ಕಳಿದ್ದ ಶಾಲಾ ವಾಹನ ಉಜ್ಜೈಯಿನಿಯ ದೇವಾಸ್ ರಸ್ತೆಯ ಚಂಡೇಸರ ಗ್ರಾಮದ ಬಳಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಚಾಲಕ ಹಾಡು ಕೇಳುತ್ತಾ ವಾಹನ ಚಲಾಯಿಸುತ್ತಿದ್ದ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ರಸ್ತೆ ಪಕ್ಕದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ಬಳಿಕ ಶಾಲಾ ವಾಹನ ಸಣ್ಣ ಹಳ್ಳಕ್ಕೆ ಮಗುಚಿ ಬಿದ್ದಿದೆ.
ಇದನ್ನೂ ಓದಿ:ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ 25- 45ರ ವಧು - ವರರ ವಿವಾಹ: ಶಂಕರಪ್ಪ ಆತ್ಮಹತ್ಯೆ..
Last Updated : Mar 29, 2022, 12:05 PM IST