ಹೌರಾ/ಪಶ್ಚಿಮಬಂಗಾಳ :ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಂಗಾಳದ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು. ಬಂಗಾಳದ ಹೌರ ಜಿಲ್ಲೆಗೆ ಭೇಟಿ ನೀಡಿದ ಅವರು ಕೈಯಲ್ಲಿ ಛತ್ರಿ ಹಿಡಿದು, ಮಳೆಯ ನೀರಿನಲ್ಲಿ ನಿಂತು ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದರು. ಪಶ್ಚಿಮ ಬಂಗಾಳದಲ್ಲಿ ಭೀಕರ ಪ್ರವಾಹಕ್ಕೆ ಜನರು ತತ್ತರಿಸಿದ್ದಾರೆ. ಈವರೆಗೆ ಸುಮಾರು 15 ಮಂದಿ ಮೃತಪಟ್ಟಿದ್ದು, ಲಕ್ಷಕ್ಕೂ ಹೆಚ್ಚು ಜನರ ಮನೆಗಳು ಹಾನಿಗೊಳಗಾಗಿವೆ.
ಕೈಯಲ್ಲಿ ಛತ್ರಿ ಹಿಡಿದು ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದ CM ಮಮತಾ ಬ್ಯಾನರ್ಜಿ
ದಾಮೋದರ ಕಣಿವೆ ಮಂಡಳಿ ಒಳಗೊಂಡಿರುವ ನಾಲ್ಕು ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಪುರ್ಬ ವರ್ಧಮಾನ್, ಪಶ್ಚಿಮ ಬರ್ಧಮಾನ್, ಪಶ್ಚಿಮ ಮೇದಿನಿಪುರ, ಹೂಗ್ಲಿ, ಹೌರಾ ಮತ್ತು ದಕ್ಷಿಣ 24 ಪರಗಣಗಳೆಲ್ಲ ಜಲಾವೃತಗೊಂಡಿವೆ..
ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದ ಸಿಎಂ ಮಮತಾ ಬ್ಯಾನರ್ಜಿ
ದಾಮೋದರ ಕಣಿವೆ ಮಂಡಳಿ ಒಳಗೊಂಡಿರುವ ನಾಲ್ಕು ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಪುರ್ಬ ವರ್ಧಮಾನ್, ಪಶ್ಚಿಮ ಬರ್ಧಮಾನ್, ಪಶ್ಚಿಮ ಮೇದಿನಿಪುರ, ಹೂಗ್ಲಿ, ಹೌರಾ ಮತ್ತು ದಕ್ಷಿಣ 24 ಪರಗಣಗಳೆಲ್ಲ ಜಲಾವೃತಗೊಂಡಿವೆ.