ರೇವಾ(ಮಧ್ಯಪ್ರದೇಶ):ನಿಯಂತ್ರಣ ಕಳೆದುಕೊಂಡ ಕಾರ್ವೊಂದು ಏಕಾಏಕಿ ಕಾಲೇಜ್ ವಿದ್ಯಾರ್ಥಿನಿಗೆ ಗುದ್ದಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಇದರ ಸಂಪೂರ್ಣ ದೃಶ್ಯಾವಳಿ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ನಿಯಂತ್ರಣ ತಪ್ಪಿ ಕಾಲೇಜ್ ವಿದ್ಯಾರ್ಥಿನಿಗೆ ಗುದ್ದಿದ ಕಾರು ರೇವಾ ಜಿಲ್ಲೆಯ ಮೌಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡಿರುವ ಕಾರ್ ಕಾಲೇಜ್ನಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ. ಇದರ ಬೆನ್ನಲ್ಲೇ ಎಲೆಕ್ಟ್ರಾನಿಕ್ ಅಂಗಡಿಯೊಳಗೆ ನುಗ್ಗಿದೆ.
ರಭಸವಾಗಿ ಕಾರು ಡಿಕ್ಕಿ ಹೊಡೆದಿರುವ ಪರಿಣಾಮ ವಿದ್ಯಾರ್ಥಿನಿ ಶಿಖಾ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಸ್ಥಳೀಯರು ಚಾಲಕನನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಅಪಘಾತದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿರಿ:ಸೋಲಿಸಲು ಸ್ಪರ್ಧಿಸಿರಲಿಲ್ಲ, ಗೆಲ್ಲಲೇಬೇಕೆಂದು ಸ್ಪರ್ಧಿಸಿದ್ವಿ; ರಮೇಶ್ ಜಾರಕಿಹೊಳಿಗೆ ಹೆಬ್ಬಾಳ್ಕರ್ ಟಾಂಗ್
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು, ತನಿಖೆ ನಡೆಸಿ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.