ಡೆಹ್ರಾಡೂನ್(ಉತ್ತರಾಖಂಡ ): ನಿರ್ಮಾಣ ಹಂತದಲ್ಲಿರುವ ಕಟ್ಟಡ ಸೇತುವೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿ, ಹಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ಬಳಿ ನಡೆದಿದೆ.
ನಿರ್ಮಾಣ ಹಂತದ ಸೇತುವೆ ಕುಸಿತ; ಓರ್ವ ವ್ಯಕ್ತಿ ಸಾವು, ಅವಶೇಷಗಳಡಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ - ನಿರ್ಮಾಣ ಹಂತದ ಕಾಮಗಾರಿ ಕುಸಿತ
ನಿರ್ಮಾಣ ಹಂತದ ಸೇತುವೆ ಕುಸಿದು ಓರ್ವ ಮೃತಪಟ್ಟು ಹಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದಿದೆ.
ಉತ್ತರಾಖಂಡ ಸೇತುವೆ ದುರಂತ
ರಿಷಿಕೇಶ್ ಹಾಗೂ ಬದ್ರಿನಾಥ ರಸ್ತೆಯ ಶಿವಪುರಿ ಎಂಬಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದಿದ್ದು, ಸುಮಾರು 14 ಮಂದಿ ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈಗಾಗಲೇ ನಾಲ್ಕು ಮಂದಿಯನ್ನು ರಕ್ಷಿಸಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯ ತೀವ್ರ ಗತಿಯಲ್ಲಿ ನಡೆಯುತ್ತಿದೆ. ಮುನಿಯ ರೆತಿ ಪೊಲೀಸ್ ಠಾಣಾ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
Last Updated : Nov 22, 2020, 10:22 PM IST