ಜಮ್ಮು ಮತ್ತು ಕಾಶ್ಮೀರ:ಜಮ್ಮುವಿನ ಜಾನಿಪುರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಕಂಡಿದ್ದು, ಅದರಡಿ ಹಲವು ಕಾರ್ಮಿಕರು ಸಿಲುಕಿರುವ ದುರ್ಘಟನೆ ಇಂದು ಸಂಜೆ ನಡೆದಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಎಸ್ಡಿಆರ್ಎಫ್ ತಂಡ ಧಾವಿಸಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. 2 ಬುಲ್ಡೋಜರ್‌ಗಳು ಕೂಡ ಅವಶೇಷಗಳನ್ನು ತೆರವು ಮಾಡುವ ಕಾರ್ಯದಲ್ಲಿ ತೊಡಗಿವೆ.
ಜಮ್ಮು ಕಾಶ್ಮೀರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ.. ಕಾರ್ಮಿಕರ ಸಾವಿನ ಶಂಕೆ - ಕಳಪೆ ಕಾಮಗಾರಿಯಿಂದ ಕಟ್ಟಡ ಕುಸಿತ
ಜಮ್ಮು ಕಾಶ್ಮೀರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಕಂಡಿದ್ದು, ಅದರಲ್ಲಿ ಕಾರ್ಮಿಕರು ಸಿಲುಕಿರುವ ಘಟನೆ ನಡೆದಿದೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ಸಾವು ನೋವಿನ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.
ಜಮ್ಮು ಕಾಶ್ಮೀರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ
ನಿರ್ಮಾಣದ ವೇಳೆ ಇಡೀ ಕಟ್ಟಡ ದಿಢೀರ್ ಕುಸಿತ ಕಂಡಿದೆ. ಇದರಿಂದ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅದರಲ್ಲಿ ಸಿಲುಕೊಂಡಿದ್ದಾರೆ. ಎಷ್ಟು ಕಾರ್ಮಿಕರು ಈ ವೇಳೆ ಅಲ್ಲಿದ್ದರು ಎಂಬ ಬಗ್ಗೆ ಮಾಹಿತಿ ದೊರೆತಿಲ್ಲ. ಕಳಪೆ ಕಾಮಗಾರಿಯಿಂದ ಕಟ್ಟಡ ಕುಸಿತ ಕಂಡಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಓದಿ:ಕಿವಿ ಸಮಸ್ಯೆಗೆ ಹೋದವಳು ಕೈ ಕಳೆದುಕೊಂಡಳು: ಜೀವನವೇ ಸರ್ವನಾಶವಾಯಿತಾ ?
Last Updated : Sep 1, 2022, 9:22 PM IST