ಗುರುಗ್ರಾಮ್ (ಹರಿಯಾಣ):ದೌಲತಾಬಾದ್ ಬಳಿಯ ಗುರುಗ್ರಾಮ್-ದ್ವಾರಕಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್ ಕುಸಿದು ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್ ಕುಸಿತ : ಮೂವರು ಕಾರ್ಮಿಕರಿಗೆ ಗಾಯ - ಗುರುಗ್ರಾಮ್-ದ್ವಾರಕಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿದ್ದ ಫ್ಲೈಓವರ್
ದೌಲತಾಬಾದ್ ಬಳಿಯ ಗುರುಗ್ರಾಮ್-ದ್ವಾರಕಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್ ಕುಸಿದಿದೆ. ಘಟನೆಯಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
Gurugram-Dwarka Expressway Flyover collapses
ಇಂದು ಬೆಳಗ್ಗೆ 7.30ರ ಸುಮಾರಿಗೆ ಗುರುಗ್ರಾಮ್-ದ್ವಾರಕಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್‌ನ ಒಂದು ಭಾಗ ಏಕಾಏಕಿ ಕುಸಿದಿದ್ದು, ಘಟನೆಯಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ಮತ್ತು ರಕ್ಷಣಾ ತಂಡದ ಸಿಬ್ಬಂದಿ ಸೇರಿದಂತೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.