ಕರ್ನಾಟಕ

karnataka

ETV Bharat / bharat

ನಿರ್ಮಾಣ ಹಂತದ ಕಟ್ಟಡ ಕುಸಿತ.. ಆರು ಕಾರ್ಮಿಕರ ದುರ್ಮರಣ, ಅನೇಕರು ಗಂಭೀರ - ದೆಹಲಿಯಲ್ಲಿ ಅಕ್ರಮ ಕಟ್ಟಡ ಕುಸಿತ

ಅಕ್ರಮವಾಗಿ ನಿರ್ಮಾಣ ಮಾಡಲಾಗ್ತಿದ್ದ ಗೋದಾಮು ಕಟ್ಟಡವೊಂದು ಕುಸಿತಗೊಂಡು ಆರು ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ದೆಹಲಿಯಲ್ಲಿ ಈ ಘಟನೆ ನಡೆದಿದೆ.

Alipur wall collapse
Alipur wall collapse

By

Published : Jul 15, 2022, 3:00 PM IST

Updated : Jul 15, 2022, 4:08 PM IST

ನವದೆಹಲಿ: ಇಲ್ಲಿನ ಅಲಿಪುರ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ದಿಢೀರ್ ಕುಸಿದ ಪರಿಣಾಮ ಆರು ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಕಟ್ಟಡದ ಅವಶೇಷಗಳಡಿ ಅನೇಕರು ಸಿಲುಕಿಕೊಂಡಿದ್ದು, ಹೆಚ್ಚಿನ ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ. ಘಟನೆಯಲ್ಲಿ ಗಾಯಗೊಂಡಿರುವ ಕೆಲವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ.. ಆರು ಕಾರ್ಮಿಕರ ದುರ್ಮರಣ, ಅನೇಕರು ಗಂಭೀರ

ಘಟನಾ ಸ್ಥಳಕ್ಕೆ ಈಗಾಗಲೇ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದರು. ಅಪಘಾತದ ಸಂದರ್ಭದಲ್ಲಿ 20ರಿಂದ 25 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈಗಾಗಲೇ 10ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ 9ಕ್ಕೂ ಅಧಿಕ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಕ್ರಮವಾಗಿ ಈ ಕಟ್ಟಡ ನಿರ್ಮಾಣ ಮಾಡಲಾಗ್ತಿದೆ ಎಂದು ಅನೇಕ ಸಲ ಲಿಖಿತ ದೂರು ಸಹ ನೀಡಲಾಗಿತ್ತು. ಆದರೆ, ಕಾಮಗಾರಿ ನಿಲ್ಲಿಸಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Last Updated : Jul 15, 2022, 4:08 PM IST

ABOUT THE AUTHOR

...view details