ನವದೆಹಲಿ:ಅನಾರೋಗ್ಯ ಹಿನ್ನೆಲೆಯಲ್ಲಿ ಭೂಗತ ಪಾತಕಿ ಛೋಟಾ ರಾಜನ್ನನ್ನುಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 27 ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಹಾರ್ ಜೈಲಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತನಿಗೆ ಈ ಮೊದಲು ಕೋವಿಡ್ ಪಾಸಿಟಿವ್ ಆಗಿದ್ದು ಅಡ್ಮಿಟ್ ಆಗಿದ್ದ. ಛೋಟಾ ರಾಜನ್‌ನನ್ನು ಇಂಡೋನೇಷಿಯಾದ ಬಾಲಿಯಲ್ಲಿ 2015ರಲ್ಲಿ ಬಂಧಿಸಲಾಗಿತ್ತು. ಅದಾದ ಬಳಿಕ ಭಾರತಕ್ಕೆ ಕರೆತಂದು ತಿಹಾರ್ ಜೈಲಿನಲ್ಲಿ ಇಡಲಾಗಿತ್ತು.