ಶ್ರೀನಗರ(ಜಮ್ಮು ಕಾಶ್ಮೀರ): ರಜೌರಿ ಜಿಲ್ಲೆಯ ಗಂಬೀರ್ ಮುಘ್ಲಾನ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಅಪರಿಚಿತ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 11ರಂದು ರಜೌರಿಯ ಗಂಬೀರ್ ಮುಘ್ಲಾನ್ ಪ್ರದೇಶದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ಉಗ್ರರಿಗಾಗಿ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಜಮ್ಮು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಶೋಧ ಕಾರ್ಯಾಚರಣೆ ವೇಳೆ, ಅವಿತಿದ್ದ ಉಗ್ರರು ಗುಂಡು ಹಾರಿಸಿದ ಪರಿಣಾಮವಾಗಿ, ಭದ್ರತಾ ಪಡೆಗಳೂ ಪ್ರತಿದಾಳಿ ನಡೆಸಿದವು. ಈ ಸಂದರ್ಭದಲ್ಲಿ ಒಬ್ಬ ಅಪರಿಚಿತ ಉಗ್ರನನ್ನು ಕೊಲ್ಲಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಒಂದು ಎಕೆ - 47, ಎರಡು ಮ್ಯಾಗಜೀನ್ ಮತ್ತು 32 ಗುಂಡುಗಳು ಮತ್ತು ಒಂದು ಗ್ರೆನೇಡ್ ಜಪ್ತಿ ಮಾಡಲಾಗಿದೆ. ಈ ಕುರಿತಂತೆ ಶಸ್ತ್ರಾಸ್ತ್ರ ಕಾಯ್ದೆ ಅಡಿ ಮಂಜಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ಪೊಲೀಸ್ ಕಾನ್ಸ್ಟೇಬಲ್ನಿಂದ ನಿರಂತರ ಅತ್ಯಾಚಾರ; ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ