ಕರ್ನಾಟಕ

karnataka

'ಒಂದು ರಾಷ್ಟ್ರ, ಒಂದು ಪಡಿತರ ಚೀಟಿ’ ಯೋಜನೆಯಡಿ 69 ಕೋಟಿ ಫಲಾನುಭವಿಗಳು

By

Published : Feb 1, 2021, 1:10 PM IST

ಒನ್ ನೇಷನ್-ಒನ್ ರೇಷನ್ ಕಾರ್ಡ್ ಯೋಜನೆಯಡಿ 69 ಕೋಟಿ ಫಲಾನುಭವಿಗಳಿದ್ದಾರೆ ಎಂದು ಕೇಂದ್ರ ಬಜೆಟ್​ ಘೋಷಣೆ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

'ಒಂದು ರಾಷ್ಟ್ರ, ಒಂದು ಪಡಿತರ ಚೀಟಿ’
'ಒಂದು ರಾಷ್ಟ್ರ, ಒಂದು ಪಡಿತರ ಚೀಟಿ’

ನವದೆಹಲಿ: ವಲಸಿಗರಿಗೂ ಆಹಾರ ಭದ್ರತೆ ಕಲ್ಪಿಸುವ ಮತ್ತು ಪಡಿತರ ಚೀಟಿದಾರರು ದೇಶದ ಯಾವುದೇ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಪಡೆದುಕೊಳ್ಳಲು ಸಹಾಯಕವಾಗುವ ‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ’ ಯೋಜನೆ ವ್ಯಾಪ್ತಿಯಲ್ಲಿ 69 ಕೋಟಿ ಫಲಾನುಭವಿಗಳಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

32 ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 'ಒಂದು ರಾಷ್ಟ್ರ, ಒಂದು ಪಡಿತರ ಚೀಟಿ' ಜಾರಿಯಲ್ಲಿದ್ದು, 63 ಕೋಟಿ ಜನರಿಗೆ ಪ್ರಯೋಜನವಾಗಿದೆ. ಇದೀಗ ಒಟ್ಟು ಶೇ 86 ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳುತ್ತಿದ್ದು, ಮುಂದಿನ ಕೆಲವು ತಿಂಗಳೊಳಗೆ ಉಳಿದ 4 ರಾಜ್ಯಗಳನ್ನು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸಹ ಈ ಯೋಜನೆಯಡಿ ಸೇರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ.

ಇನ್ನು ಕಟ್ಟಡ ಕಾರ್ಮಿಕರ ಬಗ್ಗೆ ಮಾಹಿತಿ ಸಂಗ್ರಹಿಸಲು ಪೋರ್ಟಲ್ ಅನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ABOUT THE AUTHOR

...view details