ಕರ್ನಾಟಕ

karnataka

ETV Bharat / bharat

ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ಹಣಕಾಸು ನೆರವು.. ಬಜೆಟ್​​ನಲ್ಲಿ 1 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ

Budget 2022: ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿರುವ ಬಜೆಟ್​ನಲ್ಲಿ ರಾಜ್ಯ ಸರ್ಕಾರಗಳಿಗೆ 50 ವರ್ಷಗಳ ಕಾಲ ಬಡ್ಡಿ ರಹಿತ ಸಾಲ ನೀಡಲು ನಿರ್ಧರಿಸಿದ್ದು, ವಿವಿಧ ಬಂಡವಾಳ ಹೂಡಿಕೆಗಳಿಗೆ ಇದರ ಬಳಕೆ ಮಾಡಿಕೊಳ್ಳಬಹುದಾಗಿದೆ.

Union Budget 2022
Union Budget 2022

By

Published : Feb 1, 2022, 8:48 PM IST

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿರುವ 2022-23ನೇ ಸಾಲಿನ ಬಜೆಟ್​ನಲ್ಲಿ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಇವುಗಳ ಪೈಕಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬಂಡವಾಳ ಹೂಡಿಕೆಗಾಗಿ ಹಣಕಾಸು ನೆರವು ಘೋಷಿಸಿದ್ದಾರೆ.

ರಾಜ್ಯಗಳು ಆರ್ಥಿಕವಾಗಿ ಸಬಲೀಕರಣ ಸಾಧಿಸಲು ಬಜೆಟ್​​ನಲ್ಲಿ ಆದ್ಯತೆ ನೀಡಲಾಗಿದ್ದು, ಬಂಡವಾಳ ಹೂಡಿಕೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ 1 ಲಕ್ಷ ಕೋಟಿ ರೂ.ಗಳ ಬಡ್ಡಿ ರಹಿತ ಸಾಲ ನೀಡಲು ನಿರ್ಧರಿಸಲಾಗಿದೆ. 50 ವರ್ಷಗಳವರೆಗೆ ಒಂದು ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ವೇಳೆ ತಿಳಿಸಿದರು. ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆ ಜೊತೆಗೆ ಇತರೆ ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಇದನ್ನ ಬಳಕೆ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿರಿ:ಬಜೆಟ್​ನಲ್ಲಿ 'ಬಡವರು' ಪದ ಉಲ್ಲೇಖ: ದೇಶದಲ್ಲಿ ಬಡವರಿದ್ದಾರೆಂಬುದನ್ನ ನೆನಪಿಸಿಕೊಂಡ ಸಚಿವರಿಗೆ ಧನ್ಯವಾದ ಎಂದ ಚಿದಂಬರಂ

ರಾಜ್ಯಗಳ ಆರ್ಥಿಕತೆಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕಳೆದ ಬಜೆಟ್​ನಲ್ಲಿ ಈ ಯೋಜನೆಗಾಗಿ 15,000 ಕೋಟಿ ರೂ. ಘೋಷಣೆ ಮಾಡಿದ್ದರು. ಆದರೆ, ಇದೀಗ ಇದರಲ್ಲಿ ದೊಡ್ಡ ಮಟ್ಟದ ಏರಿಕೆ ಮಾಡಿದ್ದು, ರಾಜ್ಯಗಳ ಆರ್ಥಿಕ ಬಲವರ್ಧನೆಗೋಸ್ಕರ ಹಣಕಾಸಿನ ನೆರವು ಘೋಷಿಸಿದೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

ABOUT THE AUTHOR

...view details