ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕಾಶ್ ಜಾವ್ಡೇಕರ್ ಹಾಗೂ ರವಿಶಂಕರ್ ಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡರು.
ಇಂದಿನ ಕ್ಯಾಬಿನೆಟ್ನಲ್ಲಿ ನವೆಂಬರ್ ತಿಂಗಳವರೆಗೆ 80 ಕೋಟಿ ನಾಗರೀಕರಿಗೆ ಉಚಿತವಾಗಿ ಪಡಿತರ ನೀಡಲು ನಿರ್ಧರಿಸಿದ್ದು, ಇದಕ್ಕಾಗಿ 93,000 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದರು. ಭಾರತದಲ್ಲಿನ ಅಂತರ್ಜಾಲ ವಿಸ್ತರಣೆಗೋಸ್ಕರ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದ 16 ರಾಜ್ಯಗಳ 3 ಲಕ್ಷಕ್ಕೂ ಅಧಿಕ ಹಳ್ಳಿಗಳಲ್ಲಿ Broadband ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ 19 ಸಾವಿರ ಕೋಟಿ ರೂ. ರಿಲೀಸ್ ಮಾಡಲಾಗಿದೆ ಎಂದು ರವಿಶಂಕರ್ ಪ್ರಸಾದ್ ತಿಳಿಸಿದರು.