ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ಆರಂಭಗೊಂಡಿದೆ. ಸಭೆಯಲ್ಲು ಪ್ರಮುಖವಾಗಿ ರೈತರ ಹೋರಾಟ ಸಂಬಂಧ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆಲವು ದಿನಗಳಿಂದ ತಣ್ಣಗಾಗಿದ್ದ ರೈತರ ಚಳವಳಿ ಇದೀಗ ಮತ್ತೆ ಮುನ್ನಲೆಗೆ ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ - ಟೆಲಿಕಾಮ್ ಸೆಕ್ಟರ್ ಹಾಗೂ ಟೆಕ್ಸ್ಟೈಲ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
ಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ
ಈ ಸಂಬಂಧ ಮಾತುಕತೆ ನಡೆಸಲು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಸಭೆಯಲ್ಲಿ ವಿವಿಧ ಬೆಳೆಗಳ ಮೇಲೆ ಎಂಎಸ್ಪಿ ಕುರಿತು ಚರ್ಚೆಯಾಗಲಿದೆ ಎನ್ನಲಾಗ್ತಿದೆ. ಇದರ ಜೊತೆ ಹೊಸದಾಗಿ ಜಾರಿ ಮಾಡಲಾಗಿರುವ ಎರಡು ಕೃಷಿ ಮಸೂದೆಯ ಕುರಿತಂತೆಯೂ ಮಾತುಕತೆ ನಡೆಲಿದ್ದಾರೆ. ಇದಕ್ಕೂ ಮೊದಲು ಕೇಂದ್ರ ನಾಯಕರು ಹಾಗೂ ರೈತ ಮುಖಂಡರ ನಡುವಿನ ಹಲವು ಸುತ್ತಿನ ಮಾತುಕತೆ ನಡೆದಿದ್ದು, ಯಾವುದೇ ಫಲ ನೀಡಿಲ್ಲ. ಕಳೆದೊಂದು ವರ್ಷದಿಂದ ರೈತರು ಹೋರಾಟ ನಿರತರಾಗಿದ್ದಾರೆ.
ಇದರ ಜೊತೆ ಟೆಲಿಕಾಮ್ ಸೆಕ್ಟರ್ ಹಾಗೂ ಟೆಕ್ಸ್ಟೈಲ್ ವಲಯ ಕುರಿತಂತೆಯೂ ಚರ್ಚೆ ನಡೆಯಲಿದೆ ಎನ್ನಲಾಗ್ತಿದೆ.