ನವದೆಹಲಿ: ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಸಚಿವರು ಬಜೆಟ್ ಮಂಡಿಸಲಿದ್ದಾರೆ.
ಸಂಸತ್ನ ಬಜೆಟ್ ಅಧಿವೇಶನ ಇದೇ ತಿಂಗಳು 31ರಂದು ಆರಂಭವಾಗಲಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅಂದು ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಮರು ದಿನ ಕೇಂದ್ರ ಬಜೆಟ್ ಮಂಡನೆ ಆಗಲಿದೆ.