ನವದೆಹಲಿ:ಕೇಂದ್ರ ಆರೋಗ್ಯ ಸಚಿವಾಲಯವು 2022ರ ನೀಟ್ ಪರೀಕ್ಷೆ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ ಪದವಿ)ಯ ದಿನಾಂಕವನ್ನು ಮುಂದೂಡಿದೆ.
ಗುರುವಾರ ಹೊರಡಿಸಿದ ಆದೇಶದಲ್ಲಿ, NEET PG 2022 ಪರೀಕ್ಷೆಯ ದಿನಾಂಕವನ್ನು 6-8 ವಾರಗಳವರೆಗೆ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ. ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಎಂಬಿಬಿಎಸ್ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ಬೆನ್ನಲೇ ಸರ್ಕಾರ ಪರೀಕ್ಷೆಯನ್ನು ಮುಂದೂಡಿದೆ. ಇಂದು (ಫೆ. 4) ನ್ಯಾಯಮೂರ್ತಿಗಳಾದ ಡಿ. ವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.