ಕರ್ನಾಟಕ

karnataka

ETV Bharat / bharat

ದೇಶದಲ್ಲಿ 23 ಲಕ್ಷ ಮಂದಿಗೆ ಕೋವಿಡ್​ ವ್ಯಾಕ್ಸಿನ್​, ಲಸಿಕೆಯಿಂದ ಒಂದೂ ಸಾವು ಸಂಭವಿಸಿಲ್ಲ: ಕೇಂದ್ರ ಆರೋಗ್ಯ ಇಲಾಖೆ

ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡು ಸಾವನ್ನಪ್ಪಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಲಸಿಕೆ ಪಡೆದುಕೊಂಡು ಯಾವುದೇ ಸಾವು ಸಂಭವಿಸಿಲ್ಲ ಎಂದು ತಿಳಿಸಿದೆ.

Union Health Ministry
Union Health Ministry

By

Published : Jan 27, 2021, 7:57 PM IST

ನವದೆಹಲಿ:ಕೋವಿಡ್​ ವ್ಯಾಕ್ಸಿನ್ ತೆಗೆದುಕೊಂಡು ಯಾವುದೇ ಸಾವು ಸಂಭವಿಸಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಖಚಿತಪಡಿಸಿದ್ದು, ಇದೇ ವಿಷಯವಾಗಿ ಇಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಕೇಂದ್ರ ಆರೋಗ್ಯ ಇಲಾಖೆ ಸುದ್ದಿಗೋಷ್ಠಿ

ಆರೋಗ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಮನೋಹರ್​ ಅಗ್ನಿ ಮಾತನಾಡಿ, ಇಲ್ಲಿಯವರೆಗೆ 23,28,779 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಇಂದು ಕೂಡ 2,99,299 ಮಂದಿ ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು. ಲಸಿಕೆ ಪಡೆದುಕೊಂಡು ಆಸ್ಪತ್ರೆಗೆ 16 ಜನರು ದಾಖಲಾಗಿದ್ದು, ಇದರಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಈ ಸಾವು ಕೋವಿಡ್ ವ್ಯಾಕ್ಸಿನ್ ತೆಗೆದುಕೊಂಡಿದ್ದರಿಂದ ಸಂಭವಿಸಿಲ್ಲ ಎಂದು ಅವರು ತಿಳಿಸಿದ್ದು, ಬೇರೆ ಕಾಯಿಲೆಗಳಿಂದ ಅವರು ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಓದಿ: ಕೇಂದ್ರ ಸರ್ಕಾರದಿಂದ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಮಿತಿಗೆ ಸಡಿಲಿಕೆ: ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ?

ದೇಶದಲ್ಲಿ ಕೊರೊನಾ ವೈರಸ್​ಗೆ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ವ್ಯಾಕ್ಸಿನ್ ನೀಡಲಾಗುತ್ತಿದ್ದು, ಮೊದಲ ಹಂತದಲ್ಲಿ 3 ಕೋಟಿ ಜನರಿಗೆ ಈ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

ABOUT THE AUTHOR

...view details