ನವದೆಹಲಿ :ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿರುವ ರೂಪಾಂತರ ಕೋವಿಡ್ 'ಓಮಿಕ್ರೋನ್' ಇದೀಗ ಭಾರತದಲ್ಲೂ ಭಯ ಹುಟ್ಟಿಸಿದೆ. ಇದೇ ವಿಚಾರವಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಡಿಸೆಂಬರ್ 1ರಿಂದ ಜಾರಿಗೆ ಬರುವಂತೆ ದೇಶಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ.
ಮಾರ್ಗಸೂಚಿಯಲ್ಲಿ ಏನಿದೆ?:14 ದಿನಗಳ ಪ್ರಯಾಣದ ವಿವರಗಳನ್ನು ಸಲ್ಲಿಸುವುದು. ಪ್ರಯಾಣದ ಮೊದಲು 'ಏರ್ ಸುವಿಧಾ ಪೋರ್ಟಲ್'ನಲ್ಲಿ ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿಯನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ.
ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, 'ಓಮಿಕ್ರೋನ್ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರು ಭಾರತಕ್ಕೆ ಆಗಮಿಸಿದ ನಂತರ ಕೊರೊನಾ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು.
ನಂತರ ವಿಮಾನ ನಿಲ್ದಾಣದಲ್ಲಿ ಫಲಿತಾಂಶಗಳಿಗಾಗಿ ಕಾಯಬೇಕಾಗುತ್ತದೆ. ಪರೀಕ್ಷೆಯು ನಕಾರಾತ್ಮಕವಾಗಿದ್ದರೆ 7 ದಿನಗಳವರೆಗೆ ಹೋಮ್ ಕ್ವಾರಂಟೈನ್ ಆಗುವುದು ಕಡ್ಡಾಯ.
8ನೇ ದಿನದಂದು ಮರು-ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಒಂದು ವೇಳೆ ರಿಪೋರ್ಟ್ನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದರೆ, ಮತ್ತೆ 7 ದಿನಗಳವರೆಗೆ ಸ್ವಯಂ ಕ್ವಾರಂಟೈನ್ ಆಗಬೇಕಾಗುತ್ತದೆ.
ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳು : 'ಓಮಿಕ್ರೋನ್ ರಹಿತ ದೇಶಗಳನ್ನು' ಹೊರತುಪಡಿಸಿದ ದೇಶಗಳ ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸಲಾಗುತ್ತದೆ. ಅವರು 14 ದಿನಗಳವರೆಗೆ ತಮ್ಮ ಆರೋಗ್ಯವನ್ನು ಸ್ವಯಂ-ಮೇಲ್ವಿಚಾರಣೆ ಮಾಡಿಕೊಳ್ಳಬೇಕು ಎಂದಿದೆ.
ಓದಿ:Omicron ಪೀಡಿತ ರಾಷ್ಟ್ರಗಳಿಂದ ಬರುವ ವಿಮಾನಗಳನ್ನ ನಿಷೇಧಿಸಿ : ಪ್ರಧಾನಿಗೆ ದೆಹಲಿ ಸಿಎಂ ಪತ್ರ