ನವದೆಹಲಿ:ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದ್ದು, ಕೇರಳದಲ್ಲಿ ಶೇ. 58ರಷ್ಟು ಕೋವಿಡ್ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 46,000 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಕೇರಳದಲ್ಲೇ ಅತಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ ಎಂದರು. ಸದ್ಯ ಕೇರಳದಲ್ಲಿ 1 ಲಕ್ಷಕ್ಕೂ ಅಧಿಕ ಆ್ಯಕ್ಟೀವ್ ಕೇಸ್ಗಳಿದ್ದು, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ 10 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದರು. ಉಳಿದಂತೆ ಕೆಲವೊಂದು ರಾಜ್ಯಗಳಲ್ಲಿ ಶೇ. 4-5ರಷ್ಟು ಸೋಂಕಿತ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ ಎಂಬ ಮಾಹಿತಿ ನೀಡಿದರು.