ಕರ್ನಾಟಕ

karnataka

ETV Bharat / bharat

ಅಮಿತ್​ ಶಾ 59ನೇ ಜನ್ಮದಿನ: ಶುಭ ಕೋರಿದ ಪ್ರಧಾನಿ ಮೋದಿ, ಯಡಿಯೂರಪ್ಪ, ಬೊಮ್ಮಾಯಿ - ಪ್ರಧಾನಿ ನರೇಂದ್ರ ಮೋದಿ

59ನೇ ಜನ್ಮದಿನ ಆಚರಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಮತ್ತು ರಾಜ್ಯ ನಾಯಕರು ಶುಭಾಶಯ ಕೋರಿದ್ದಾರೆ.

union-home-minister-amit-shah-birthday
ಬಿಜೆಪಿ ಚಾಣಕ್ಯ, ಗೃಹ ಸಚಿವ ಅಮಿತ್​ ಶಾ 59ನೇ ಜನ್ಮದಿನ.. ಶುಭಾಶಯ ಕೋರಿದ ಪ್ರಧಾನಿ ಮೋದಿ, ಯಡಿಯೂರಪ್ಪ, ಬೊಮ್ಮಾಯಿ

By ETV Bharat Karnataka Team

Published : Oct 22, 2023, 4:10 PM IST

ನವದೆಹಲಿ: ಗೃಹ ಸಚಿವ ಅಮಿತ್​ ಶಾ ಅವರಿಗಿಂದು 59ನೇ ಹುಟ್ಟು ಹಬ್ಬದ ಸಂಭ್ರಮ. ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಮತ್ತು ರಾಜ್ಯ ನಾಯಕರು ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಕೇಂದ್ರ ಸಚಿವರಾದ ರಾಜನಾಥ್​ ಸಿಂಗ್​, ನಿತಿನ್​ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ನಳಿನ್​ ಕುಮಾರ್​ ಸೇರಿದಂತೆ ಹಲವರು ಶುಭಾಶಯ ಕೋರಿದ್ದಾರೆ.

'ಶಾ ಅವರು ಭಾರತದ ಸಮಗ್ರ ಅಭಿವೃದ್ಧಿ ಮತ್ತು ಬಡವರ ಜೀವನ ಗುಣಮಟ್ಟವನ್ನು ಹೆಚ್ಚಿಸಲು ಉತ್ಸುಕರಾಗಿದ್ದಾರೆ. ಉತ್ತಮ ಆಡಳಿತ ನೀಡುವ ಮೂಲಕ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಭಾರತದ ಭದ್ರತೆ ಮತ್ತು ಸಹಕಾರ ವಲಯದ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಬಿಜೆಪಿಯನ್ನು ಬಲಪಡಿಸುವಲ್ಲಿ ಅಮಿತ್ ಶಾ ಅವರ ಪಾತ್ರ ಪ್ರಮುಖವಾಗಿದ್ದು, ಅವರಿಗೆ ದೇವರು ಆರೋಗ್ಯ ಮತ್ತು ಆಯುಷ್ಯವನ್ನು ನೀಡಿ ಹರಸಲಿ' ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಅಮಿತ್ ಶಾ ಪ್ರತಿಕ್ರಿಯಿಸಿ, "ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಜೀ, ನಿಮ್ಮ ಹಾರೈಕೆಗಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನಿಮ್ಮ ಮಾತುಗಳು ಯಾವಾಗಲೂ ರಾಷ್ಟ್ರಕ್ಕೆ ಉತ್ತಮ ಸೇವೆ ಸಲ್ಲಿಸಲು ಸ್ಫೂರ್ತಿ ಮತ್ತು ಮಾರ್ಗದರ್ಶಕವಾಗಿದೆ. ಇದು ನಿಜವಾಗಿಯೂ ನಿಮ್ಮ ದೂರದೃಷ್ಟಿಯ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ರಾಷ್ಟ್ರಕ್ಕೆ ಕೊಡುಗೆ ನೀಡಲು ಒಂದು ಅವಕಾಶ' ಎಂದು ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶುಭ ಕೋರಿ, 'ಅಮಿತ್​ ಶಾ ಅವರು ರಾಷ್ಟ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಸಮರ್ಪಣಾಭಾವ, ಪ್ರಾಮಾಣಿಕತೆ, ಸಂಘಟನಾ ಕೌಶಲ್ಯ ಅನುಕರಣೀಯ. ಜೊತೆಗೆ ಇದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸ್ಪೂರ್ತಿಯಾಗಿದೆ' ಎಂದಿದ್ದಾರೆ.

ರಾಜ್ಯ ನಾಯಕರಿಂದ ಶುಭಾಶಯ:ರಾಜ್ಯ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಮಿತ್​ ಶಾ ಅವರಿಗೆ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಲಿ' ಎಂದು ಹೇಳಿದ್ದಾರೆ.

'ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ, ದೇಶಸೇವೆಯಲ್ಲಿ ನೀವು ಮತ್ತಷ್ಟು ಯಶಸ್ಸನ್ನು ಸಾಧಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ' ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

"ನಮ್ಮ ಹಿರಿಯ ನಾಯಕರು, ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇಶಸೇವೆಯಲ್ಲಿ ತೊಡಗಲು ನಿಮಗೆ ಉತ್ತಮ ಆಯುರಾರೋಗ್ಯವನ್ನು ನೀಡಲಿ' ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ ಹೇಳಿದ್ದಾರೆ.

ಇದನ್ನೂ ಓದಿ:ಭಾರತ ಹಿಂದೂ ರಾಷ್ಟ್ರ, ಇಲ್ಲಿ ಮುಸ್ಲಿಮರು ಸುರಕ್ಷಿತ: ಮೋಹನ್ ಭಾಗವತ್

ABOUT THE AUTHOR

...view details