ನವದೆಹಲಿ:ಬಿಜೆಪಿ ನಡೆಸುತ್ತಿರುವ ಹರ್ ಘರ್ ತಿರಂಗಾ ಅಭಿಯಾನ, ಆರ್ಎಸ್ಎಸ್ ಬಗ್ಗೆ ಟೀಕಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಬ್ಬ ಅರೆಕಾಲಿಕ ರಾಜಕಾರಣಿ. ರಾಹುಲ್ಗೆ ಯಾವುದೇ ವಿಚಾರಗಳ ಬಗ್ಗೆ ಗಾಂಭೀರ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದರು.
ಸಂಸತ್ ಮುಂದೆ ಮಾಧ್ಯಮಗಳ ಜೊತೆ ಮಾತನಾಡಿ ಜೋಶಿ, ರಾಹುಲ್ ಗಾಂಧಿ ಅವರಿಗೆ ಯಾವುದೇ ವಿಷಯಗಳ ಮೇಳೆ ಗಾಂಭೀರ್ಯವಿಲ್ಲ. ಅವರೊಬ್ಬ ಅರೆಕಾಲಿಕ ರಾಜಕಾರಣಿ. ಅಲ್ಲಲ್ಲಿ ಸುತ್ತಾಡುತ್ತಾ ಇಂತಹ ಹೇಳಿಕೆಗಳನ್ನೇ ಕೊಡುತ್ತಾರೆ. ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬಾರದು ಮತ್ತು ಅದಕ್ಕೆ ಪ್ರತಿಕ್ರಿಯೆ ನೀಡಬಾರದು ಎಂದು ಚುಚ್ಚಿದರು.
ಆರ್ಎಸ್ಎಸ್ ಮತ್ತು ಅದರ ಸಿದ್ಧಾಂತವನ್ನು ದೇಶದ ಜನರು ಒಪ್ಪಿಕೊಂಡಿದ್ದಾರೆ. ನಾವೇ ಸ್ವಾತಂತ್ರ್ಯ ತಂದುಕೊಟ್ಟೆವು ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡು ತಿರುಗಾಡಿದ್ದಕ್ಕೆ ಕಾಂಗ್ರೆಸ್ ದೇಶದಲ್ಲಿಯೇ ತಿರಸ್ಕೃತಗೊಂಡಿದೆ. ಇದು ಅವರಿಂದ ಅರಗಿಸಿಕೊಳ್ಳಲಾಗುತ್ತಿಲ್ಲ. ಹೀಗಾಗಿ ರಾಹುಲ್ ಎಲ್ಲೆಂದರಲ್ಲಿ, ಏನೇನೋ ಹೇಳಿಕೆ ನೀಡುತ್ತಾರೆ. ಅದಕ್ಕೆಲ್ಲಾ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದರು.