ಕುಶಿನಗರ (ಉತ್ತರ ಪ್ರದೇಶ):ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರದಂದು ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ರಾಮ್‌ಕೋಲಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವಿನಯ್ ಗೌರ್ ಅವರ ಪರ ಮತ ಯಾಚಿಸಿದ್ದಾರೆ. ಜೊತೆಗೆ ಯೋಗಿ ಆದಿತ್ಯನಾಥ್ ಸರ್ಕಾರ ಈ ಹಿಂದೆ ಆಡಳಿತ ನಡೆಸಿದ ಸರ್ಕಾರಕ್ಕಿಂತಲೂ ಸಂಪೂರ್ಣವಾಗಿ ವಿಭಿನ್ನವಾಗಿದೆ ಎಂದು ಶ್ಲಾಘಿಸಿದರು.
ಸಮಾಜವಾದಿ ಪಕ್ಷ (ಎಸ್‌ಪಿ), ಬಹುಜನ ಸಮಾಜ್ ಪಕ್ಷ (ಬಿಎಸ್‌ಪಿ) ಮತ್ತು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಹಲವಾರು ವರ್ಷಗಳ ಕಾಲ ಆಡಳಿತ ನಡೆಸಿವೆ. ಆದರೆ, ರಾಜ್ಯದ ಇತರ ಆಡಳಿತಗಳಿಗೆ ಹೋಲಿಸಿದರೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಆಡಳಿತವು ಉನ್ನತವಾಗಿದೆ. ಯೋಗಿ ಸರ್ಕಾರ ಯುಪಿಯಲ್ಲಿ ಕಳಂಕರಹಿತ ಸರ್ಕಾರವಾಗಿದೆ ಎಂದು ತಿಳಿಸಿದರು.