ಲಖನೌ(ಉತ್ತರ ಪ್ರದೇಶ): ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮೈನ್ಪುರಿ ಜಿಲ್ಲೆಯ ಕರ್ಹಾಲ್ ವಿಧಾನಸಭೆ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ತಂತ್ರಕ್ಕೆ ಪ್ರತಿತಂತ್ರ ರೂಪಿಸಿರುವ ಆಡಳಿತ ಪಕ್ಷ ಬಿಜೆಪಿ ಇದೀಗ ಕೇಂದ್ರ ಸಚಿವರಿಗೆ ಟಿಕೆಟ್ ನೀಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್ನಲ್ಲಿ ಸಚಿವರಾಗಿರುವ ಎಸ್ಪಿ ಸಿಂಗ್ ಬಾಘೇಲ್ ಉತ್ತರಪ್ರದೇಶದಲ್ಲಿ ಪ್ರಬಲ ದಲಿತ ನಾಯಕರಾಗಿದ್ದು, ಆಗ್ರಾ ಲೋಕಸಭೆ ಕ್ಷೇತ್ರದ ಸಂಸದರಾಗಿ ಈ ಹಿಂದೆ ಆಯ್ಕೆಯಾಗಿದ್ದರು. ಇದೀಗ ಅಖಿಲೇಶ್ ಯಾದವ್ ವಿರುದ್ಧ ಇವರನ್ನ ಕಣಕ್ಕಿಳಿಸಲಾಗಿದೆ.
ಇದನ್ನೂ ಓದಿರಿ:ಯುಪಿ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಸ್ಪರ್ಧೆ.. ಕರ್ಹಾಲ್ ಕ್ಷೇತ್ರದಿಂದ ಅಖಾಡಕ್ಕಿಳಿದ SP ಸಂಸದ