ಕರ್ನಾಟಕ

karnataka

ETV Bharat / bharat

ಮೋದಿ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ - ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ

ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವರಾಗಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರ ಅಭಿವೃದ್ಧಿ ಪರ ಕೆಲಸಕ್ಕಾಗಿ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Union ministers Mukhtar Abbas Naqvi
Union ministers Mukhtar Abbas Naqvi

By

Published : Jul 6, 2022, 6:35 PM IST

Updated : Jul 6, 2022, 6:41 PM IST

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ ಸ್ಥಾನದ ಅವಧಿ ಅಂತ್ಯಗೊಂಡಿರುವ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಮೋದಿ ಸಚಿವ ಸಂಪುಟದಲ್ಲಿ ಮುಖ್ತಾರ್ ಅಬ್ಬಾಸ್ ನಖ್ವಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿ ಹಾಗೂ ಆರ್​ಸಿಪಿ ಸಿಂಗ್ ಉಕ್ಕು ಖಾತೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರನ್ನ ಮತ್ತೊಂದು ಅವಧಿಗೆ ರಾಜ್ಯಸಭೆಗೆ ಕಳುಹಿಸದಿರಲು ನಿರ್ಧರಿಸಿರುವ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಬ್ಬರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ, ಇವರ ಅಭಿವೃದ್ಧಿ ಪರ ಕೆಲಸಕ್ಕೆ ಪ್ರಧಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆಂದು ವರದಿಯಾಗಿದೆ.

ಮುಖ್ತಾರ್ ಅಬ್ಬಾಸ್ ನಖ್ವಿ ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನ ಉಪರಾಷ್ಟ್ರಪತಿ ಸ್ಥಾನಕ್ಕೆ ಪರಿಗಣಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಮುಖ್ತಾರ್ ನಖ್ವಿ ಅಬ್ಬಾಸ್ ಬಿಜೆಪಿ ಹಿರಿಯ ಮುಖಂಡರಾಗಿದ್ದು, ಆರ್​ಸಿಪಿ ಸಿಂಗ್​ ಜೆಡಿಯು ಪಕ್ಷದ ಮುಖಂಡರಾಗಿದ್ದಾರೆ, ಇಬ್ಬರು ಮೋದಿ 2.0 ಸರ್ಕಾರದಲ್ಲಿ ಸಚಿವರಾಗಿದ್ದರು.

ಇದನ್ನು ಓದಿ:ಸಪ್ತಪದಿ ತುಳಿಯಲಿದ್ದಾರೆ ಪಂಜಾಬ್ ಸಿಎಂ.. ಗುರುಪ್ರಿತ್ ಕೌರ್ ಜೊತೆ ನಾಳೆ ವಿವಾಹ

Last Updated : Jul 6, 2022, 6:41 PM IST

ABOUT THE AUTHOR

...view details