ಲಖನೌ (ಉತ್ತರ ಪ್ರದೇಶ):ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಸೋದರಳಿಯನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ಬುಧವಾರ ನಡೆದಿದೆ. ನಂದ ಕಿಶೋರ್ ಎಂಬುವವರೇ ಸಾವಿಗೆ ಶರಣಾಗಿದ್ದಾರೆ.
ಪ್ರಾಪರ್ಟಿ ಡೀಲರ್ ಆಗಿ ಕೆಲಸ ಮಾಡುತ್ತಿದ್ದ ನಂದ ಕಿಶೋರ್ ಲಖನೌದ ದುಬಗ್ಗದ ಬಿಗಾರಿಯಾ ಪ್ರದೇಶದಲ್ಲಿರುವ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ ಆತ್ಮಹತ್ಯೆ ಮಾಡಿಕೊಂಡಿರುವುದು ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.