ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಮುಂದಿನ ತಿಂಗಳ 10ರಂದು ಮೊದಲ ಹಂತದ ಮತದಾನ ನಡೆಯಲಿದೆ. ಅದಕ್ಕಾಗಿ ಕಾಂಗ್ರೆಸ್ ಈಗಾಗಲೇ 125 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ್ದು, ಇದೀಗ ಬಿಜೆಪಿ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ತವಕದಲ್ಲಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಬೆಳಗ್ಗೆ ಮಹತ್ವದ ಸಭೆ ನಡೆದಿದ್ದು, ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಿಂದ ಕಣಕ್ಕಿಳಿಯುವುದು ಬಹುತೇಕ ಖಚಿತಗೊಂಡಿದೆ. ಮಥುರಾದಿಂದ ಅವರನ್ನು ಕಣಕ್ಕಿಳಿಸುವ ಬಗ್ಗೆ ಕೂಡ ಈ ವೇಳೆ ಚರ್ಚೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಯೋಗಿ ಆದಿತ್ಯನಾಥ್ ತಮ್ಮ ರಾಜಕೀಯ ಇತಿಹಾಸದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿಲ್ಲ. ಆದರೆ, ಗೋರಖ್ಪುರ್ ಲೋಕಸಭೆಯಿಂದ 5 ಸಲ ಸಂಸದರಾಗಿರುವ ಅವರು, ಸದ್ಯ ವಿಧಾನ ಪರಿಷತ್ ಸದಸ್ಯರಾಗಿ, ಮುಖ್ಯಮಂತ್ರಿಯಾಗಿದ್ದಾರೆ.