ಕರ್ನಾಟಕ

karnataka

ETV Bharat / bharat

ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರಚಿಸಿಲು ಯುಪಿ ಬಿಜೆಪಿ ಸಭೆ - ವಿಧಾನಸಭಾ ಚುನಾವಣೆ ಹಿನ್ನೆಲೆ

ಬಿಜೆಪಿ ಪಕ್ಷದ ರಾಜ್ಯ ಪ್ರಧಾನ ಕಚೇರಿಯಲ್ಲಿ ಇಂದು ರಾಜ್ಯ ವಿಧಾನಸಭಾ ಚುನಾವಣೆಯ ಕುರಿತು ಉನ್ನತ ಮಟ್ಟದ ಸಭೆ ನಡೆಯಲಿದೆ. ರಾಜ್ಯ ಉಸ್ತುವಾರಿ ರಾಧಾ ಮೋಹನ್ ಸಿಂಗ್, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುನೀಲ್ ಬನ್ಸಾಲ್, ಸಹ-ಉಸ್ತುವಾರಿ ಯುಪಿ, ಪ್ರಧಾನ ಕಾರ್ಯದರ್ಶಿ, ರಾಜ್ಯ ಸಚಿವರು, ಮತ್ತು ಪಕ್ಷದ ಅನೇಕ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಬಿಜೆಪಿ ಸಭೆ
BJP meeting

By

Published : Sep 9, 2021, 12:50 PM IST

ಲಖನೌ:ಮುಂಬರುವ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಯುಪಿ ಬಿಜೆಪಿ ಸರ್ಕಾರ ಇಂದು ಸ್ವತಂತ್ರ ದೇವ್ ಸಿಂಗ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಕಾರ್ಯಕರ್ತರ ಸಭೆ ಇಂದು ನಡೆಯಲಿದೆ.

ಈ ಸಭೆ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಮಹತ್ವ ಪಡೆದುಕೊಳ್ಳಲಿದೆ. ಸಭೆ ಮಧ್ಯಾಹ್ನದಿಂದ ಸಂಜೆಯವರೆಗೆ ಜರುಗಲಿದೆ. ಸಭೆಯಲ್ಲಿ ವಿಧಾನಸಭೆ ಚುನಾವಣೆ ಸೇರಿದಂತೆ ಪ್ರಸ್ತುತ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.

ಸಭೆಯಲ್ಲಿ ಯುಪಿ ಉಸ್ತುವಾರಿ ರಾಧಾ ಮೋಹನ್ ಸಿಂಗ್, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್, ಸಹ-ಉಸ್ತುವಾರಿ ಯುಪಿ, ಪ್ರಧಾನ ಕಾರ್ಯದರ್ಶಿ, ರಾಜ್ಯ ಸಚಿವರು ಮತ್ತು ಪಕ್ಷದ ಅನೇಕ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ. 2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 312 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿತ್ತು. 403 ಸದಸ್ಯರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷ ಶೇ. 39.67 ಮತಗಳನ್ನು ಪಡೆದುಕೊಂಡಿತ್ತು. ಸಮಾಜವಾದಿ ಪಕ್ಷ (ಎಸ್‌ಪಿ) 47 ಸ್ಥಾನ, ಬಿಎಸ್‌ಪಿ 19 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ ಏಳು ಸ್ಥಾನಗಳನ್ನು ಪಡೆದಿತ್ತು.

ಓದಿ: ಹಳ್ಳಿಗಳಲ್ಲಿ ಬರಿಗಾಲಿನಲ್ಲಿ ಓಡಾಡಿ ನಿರ್ಮಲಾ ಸೀತಾರಾಮನ್ ವಾಸ್ತವ ತಿಳಿಯಲಿ: ಚಿದಂಬರಂ ಟ್ವೀಟ್​

ABOUT THE AUTHOR

...view details