ಮೈನ್‌ಪುರಿ (ಉತ್ತರ ಪ್ರದೇಶ): ಮೈನ್‌ಪುರಿಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕನೋರ್ವನ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶ: ಬಿಜೆಪಿ ಎಸ್‌ಸಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನ ಮೇಲೆ ಗುಂಡಿನ ದಾಳಿ - ಗೌತಮ್ ಕಠಾರಿಯಾ
ಬಿಜೆಪಿ ಪರಿಶಿಷ್ಟ ಜಾತಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗೌತಮ್ ಕಠಾರಿಯಾ ಎಂಬವರ ಮೇಲೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಇಬ್ಬರ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಅಪರಿಚಿತ ದುಷ್ಕರ್ಮಿಗಳಿಂದ ಬಿಜೆಪಿ ನಾಯಕನ ಮೇಲೆ ಗುಂಡೇಟು
ಪೊಲೀಸರ ಪ್ರಕಾರ, ಶನಿವಾರ ತಡರಾತ್ರಿ ಅಥವಾ ಭಾನುವಾರ ಇಬ್ಬರು ಅಪರಿಚಿತರು ಬಿಜೆಪಿ ಪರಿಶಿಷ್ಟ ಜಾತಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗೌತಮ್ ಕಠಾರಿಯಾ ಮೇಲೆ ಗುಂಡು ಹಾರಿಸಿದ್ದಾರೆ. ಅವರ ಭುಜದ ಬಳಿ ಗುಂಡಿನ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಆಗ್ರಾಕ್ಕೆ ಕಳುಹಿಸಿದ್ದಾರೆ. ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ದಾಳಿಕೋರರಿಗೆ ಶೋಧ ಕಾರ್ಯ ಆರಂಭಿಸಿದ್ದಾರೆ.
ಇದನ್ನೂ ಓದಿ:ಯುವ ನಟ ಸತೀಶ್ ಹತ್ಯೆ ಪ್ರಕರಣ : ಬಾಮೈದ ಸೇರಿ ಇಬ್ಬರ ಬಂಧನ