ಬಸ್ತಿ (ಉತ್ತರ ಪ್ರದೇಶ):ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಚೇರಿಯ ವಿಶೇಷ ಕರ್ತವ್ಯದ ಅಧಿಕಾರಿ (OSD) ಶುಕ್ರವಾರ ಬಸ್ತಿ ಬಳಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿಗಳ ಒಎಸ್‌ಡಿ ಮೋತಿಲಾಲ್ ಸಿಂಗ್ ಮತ್ತು ಅವರ ಪತ್ನಿ ರಾಷ್ಟ್ರೀಯ ಹೆದ್ದಾರಿ 28 ರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಯೋಗಿ ಆದಿತ್ಯನಾಥ್ ಕಚೇರಿಯ ವಿಶೇಷ ಕರ್ತವ್ಯಾಧಿಕಾರಿ ಮೋತಿಲಾಲ್ ಸಿಂಗ್ ಸಾವು - ವಿಶೇಷ ಕರ್ತವ್ಯದ ಅಧಿಕಾರಿ ಮೋತಿಲಾಲ್ ಸಿಂಗ್ ಸಾವು
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಚೇರಿಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮೋತಿಲಾಲ್ ಸಿಂಗ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಮೋತಿಲಾಲ್ ಸಿಂಗ್ ಸಾವು
ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಅಧಿಕಾರಿ ಮೋತಿಲಾಲ್ ಸಿಂಗ್ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವೈದ್ಯಕೀಯ ಕಾಲೇಜು ಗೋರಖ್‌ಪುರಕ್ಕೆ ದಾಖಲಿಸಲಾಗಿದೆ. ಇದೇ ವೇಳೆ, ಮೋತಿಲಾಲ್ ಸಿಂಗ್ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
ಇದನ್ನು ಓದಿ:ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಗುಲಾಂ ನಬಿ ಆಜಾದ್