ಲಖನೌ: ಲಖನೌನ ಸಿವಿಲ್ ಆಸ್ಪತ್ರೆಯಲ್ಲಿ ಯೋಗಿ ಆದಿತ್ಯನಾಥ್ ಕೊರೊನಾ ವ್ಯಾಕ್ಸಿನ್‌ನ ಮೊದಲ ಡೋಸ್ ಪಡೆದರು.
ನಂತರ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಕೋವಿಡ್ ಲಸಿಕೆ ಪಡೆಯುವಂತೆ ಹಾಗೂ ಕೊರೊನಾ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಲಸಿಕೆ ಪಡೆದ ಬಳಿಕವೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡುವಂತೆ ಮನವಿ ಮಾಡಿದರು.