ಲಖನೌ(ಉತ್ತರ ಪ್ರದೇಶ):ಉತ್ತರ ಪ್ರದೇಶದಲ್ಲಿ ಎರಡನೇ ಅವಧಿಗೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗವರ್ನರ್ ಆನಂದಿಬೆನ್ ಪಟೇಲ್ ಅವರನ್ನು ಭೇಟಿಯಾದ ಅವರು ರಾಜೀನಾಮೆ ಪತ್ರ ಸಲ್ಲಿಸಿದರು.
2017ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಯೋಗಿ ಆದಿತ್ಯನಾಥ್ ಐದು ವರ್ಷಗಳ ಕಾಲ ಸಿಎಂ ಆಗಿದ್ದರು. 2022ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.